Andolana originals

ಓದುಗರ ಪತ್ರ: ಬಸ್‌ ತಂಗುದಾಣ ನಿರ್ಮಿಸಿ

ಚಾಮರಾಜನಗರ ತಾಲ್ಲೂಕಿನ ಸಂತೆಮರಹಳ್ಳಿಯಲ್ಲಿ ಬಸ್ ತಂಗುದಾಣವಿಲ್ಲದ ಜನರು ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಳಿಗಾಗಿ ಕಾಯಬೇಕಾಗಿದೆ.
ಸಂತೇಮರಹಳ್ಳಿಯಿಂದ ಕೊಳ್ಳೇಗಾಲ, ತಿ.ನರಸೀಪುರ ಹಾಗೂ ಮೈಸೂರಿಗೆ ಪ್ರತಿನಿತ್ಯ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಚರಿಸುತ್ತಾರೆ. ಅದರೆ ಇಲ್ಲಿ ಬಸ್‌ ತಂಗುದಾಣವಿಲ್ಲದೇ ಪ್ರಯಾಣಿಕರು ರಸ್ತೆ ಬದಿಯ ವಿವಿಧ ಕಚೇರಿ, ಅಂಗಡಿ ಮುಂಗಟ್ಟುಗಳ ಮುಂದೆಯೇ ನಿಂತು ಬಸ್‌ಗಾಗಿ ಕಾಯಬೇಕಿದೆ.
ಹೀಗೆ ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೆ ಬಸ್‌ಗಾಗಿ ಕಾಯುತ್ತಿದ್ದರೂ ಕೆಲ ಬಾರಿ ಬಸ್‌ಗಳು ಇಲ್ಲಿ ನಿಲುಗಡೆಯನ್ನೇ ನೀಡುವುದಿಲ್ಲ. ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಭಾಗದಲ್ಲಿ ಒಂದು ಬಸ್ ಕಂಗುದಾಣ ನಿರ್ಮಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

1 hour ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

1 hour ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

1 hour ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

2 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

2 hours ago