ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಹರಿದಿನಗಳು, ಜಾತ್ರೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಾಣ ಮಾಡಿ ದರೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಆದ್ದರಿಂದ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪ್ರತಿಯೊಂದು ಗ್ರಾಮದಲ್ಲಿಯೂ ಮಾದರಿ ಶೌಚಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





