ಮೈಸೂರಿನಿಂದ ಎಚ್.ಡಿ.ಕೋಟೆಗೆ ತೆರಳುವ ಮಾರ್ಗದಲ್ಲಿ ಸಿಗುವ ಮಾದಾಪುರ ಸರ್ಕಲ್‌ನಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದೆ. ಇದರಿಂದಾಗಿ ಬಸ್ಸಿಗಾಗಿ ಕಾಯುವ ಸಾರ್ವಜನಿಕರು ಅಕ್ಕ ಪಕ್ಕದಲ್ಲಿ ಇರುವ ಮಳಿಗೆಗಳ ಮುಂದೆ ನಿಲ್ಲುವುದು ಅನಿವಾರ್ಯವಾಗಿದೆ.
ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಗೊಂಡಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ





