ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಪುರಸಭೆಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಪಟ್ಟಣದ ಪ್ರಮುಖ ಸ್ಥಳಗಳಾದ ತಾಲ್ಲೂಕು ಆಡಳಿತ ಭವನದ ಆವರಣ, ತಾಲ್ಲೂಕು ಪಂಚಾಯಿತಿ ಕಚೇರಿ, ಗದ್ದಿಗೆ ಸರ್ಕಲ್ ಸೇರಿದಂತೆ ಕೆಲವು ಪ್ರಮುಖ ರಸ್ತೆಗಳ ಕಡೆ ಸಾರ್ವಜನಿಕ ಶೌಚಾಲಯ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ತಿಮ್ಮರಾಜು, ಭೋಗೇಶ್ವರ ಕಾಲೋನಿ, ಹೆಚ್.ಡಿ.ಕೋಟೆ ತಾ.





