Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಓದುಗರ ಪತ್ರ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ ಇಲ್ಲವೆ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುವವರು ಬರುತ್ತಾರೆ.

ಹಾಗೆಯೇ ರೈತರು, ತರಕಾರಿ ಹಾಗೂ ದವಸ ಧಾನ್ಯಗಳನ್ನು ಮಾರಾಟ ಮಾಡಲು ಬರುತ್ತಾರೆ. ಲೋಡರ್ಸ್‌ಗಳು ಕೂಲಿ ಕೆಲಸಕ್ಕೆ ಬರುತ್ತಾರೆ. ದಿನನಿತ್ಯ ಅಧಿಕ ಸಂಖ್ಯೆಯಲ್ಲಿ ಜನರು ಬಂದು ಹೋಗುವ ಈ ಪ್ರದೇಶದಲ್ಲಿ ಶೌಚಾಲಯಗಳ ಕೊರತೆ ಕಂಡುಬರುತ್ತಿದೆ. ಇರುವ ಮೂರ‍್ನಾಲ್ಕು ಶೌಚಾಲಯಗಳೂ ಬಾಗಿಲು ಬಂದ್ ಆಗಿರುತ್ತವೆ. ಇದರಿಂದ ಸಾರ್ವಜನಿಕರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ಇದೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಮನುಷ್ಯನಿಗೆ ಅತ್ಯವಶ್ಯಕವಾದ ಶೌಚಾಲಯಗಳನ್ನು ಜನರ ಅವಶ್ಯಕತೆಗೆ ತಕ್ಕಂತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಜತೆಗೆ ಈ ಶೌಚಾಲಯಗಳ ಬಾಗಿಲುಗಳು ತೆರೆದಿರುವಂತೆ ಹಾಗೂ ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳುವುದೂ ಅತ್ಯಗತ್ಯವಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ. ಕೋಟೆ ತಾಲ್ಲೂಕು

Tags:
error: Content is protected !!