ಮೈಸೂರಿನ ರಿಂಗ್ ರಸ್ತೆಯ ಸಮೀಪವಿರುವ ಕೋಟೆಹುಂಡಿ ಗ್ರಾಮದಲ್ಲಿ ಚರಂಡಿ ಹಾಗೂ ರಸ್ತೆಯ ವ್ಯವಸ್ಥೆ ಇಲ್ಲದೇ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.
ಗ್ರಾಮದ ಸಮೀಪವೇ ಖಾಸಗಿ ಬಡಾವಣೆಗಳು ನಿರ್ಮಾಣವಾಗುತ್ತಿದ್ದು, ಅಲ್ಲಿಗೆ ಮನೆಗಳ ನಿರ್ಮಾಣಕ್ಕೆ ಮುನ್ನವೇ ರಸ್ತೆ, ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ನೂರಾರು ವರ್ಷಗಳಿಂದ ಇರುವ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸದೇ ಇರುವುದು ಬೇಸರದ ಸಂಗತಿಯಾಗಿದೆ. ಇನ್ನಾದರೂ ಗ್ರಾಮಪಂಚಾಯಿತಿ ಅಧಿಕಾರಿಗಳು ಹಾಗೂ ಶಾಸಕರು ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಮಂಜೇಶ್ ದೇವಗಳ್ಳಿ , ಮೈಸೂರು





