ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್‌ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ.
ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.
-ಜವರಯ್ಯ ಚೌಡಹಳ್ಳಿ, ಎಚ್.ಡಿ.ಕೋಟೆ ತಾಲ್ಲೂಕು





