Andolana originals

ಓದುಗರ ಪತ್ರ: ಶುದ್ಧ ನೀರಿನ ಘಟಕಗಳಲ್ಲಿ ನಗದು

ರಹಿತ ಪಾವತಿ ವ್ಯವಸ್ಥೆ ಮಾಡಿ ಮೈಸೂರು ನಗರ ಪಾಲಿಕೆ ವತಿಯಿಂದ ನಗರದ ಹಲವು ಬಡಾವಣೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ (ಆರ್‌ಒ ಪ್ಲಾಂಟ್)ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ೫ ರೂಪಾಯಿಯ ಹೊಸ ನಾಣ್ಯವನ್ನು ಹಾಕಿದಾಗ ಮಾತ್ರ ಸಾರ್ವಜನಿಕರು ನೀರು ಪಡೆಯ ಬಹುದಾಗಿದೆ. ಬಹುತೇಕ ಸಾರ್ವಜನಿಕರು ೫ ರೂಪಾಯಿ ನಾಣ್ಯಕ್ಕಾಗಿ ರಸ್ತೆಯಲ್ಲಿ ಓಡಾಡುವ ಜನರನ್ನು, ಇಲ್ಲ ಅಕ್ಕ- ಪಕ್ಕದ ಅಂಗಡಿಗಳಿಗೆ ಹೋಗಿ ನಾಣ್ಯ ಪಡೆಯುವ ಪರಿಸ್ಥಿತಿ ಇದೆ. ಸಾಮಾನ್ಯವಾಗಿ, ಎಲ್ಲರ ಮನೆಯಲ್ಲೂ ಹಿರಿಯ ನಾಗರಿಕರೇ ನೀರು ತೆಗೆದುಕೊಂಡು ಬರುವ ಪರಿಸ್ಥಿತಿ ಇದೆ. ೫ ರೂಪಾಯಿ ನಾಣ್ಯಕ್ಕಾಗಿ ಬೇರೆಯವರನ್ನು ಕೇಳುವುದು ಅವರಿಗೆ ಒಂದು ರೀತಿಯಲ್ಲಿ ಮುಜುಗರವೂ ಆಗಬಹುದು. ತಂತ್ರಜ್ಞಾನ ಇಷ್ಟು ಮುಂದುವರಿದಿದ್ದರೂ ಮೈಸೂರು ನಗರ ಪಾಲಿಕೆಯವರು, ಇನ್ನೂ ಓಬಿರಾಯನ ಕಾಲದಲ್ಲೇ ಇದ್ದಾರೆ. ನಾಣ್ಯದ ವ್ಯವಸ್ಥೆಯ ಬದಲಾಗಿ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಕಾರ್ಡ್ ಸ್ವೈಪಿಂಗ್ ವ್ಯವಸ್ಥೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ, ನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago