ಕಳೆದ ಹತ್ತು ವರ್ಷಗಳ ಹಿಂದೆ, ರಾಜ್ಯದಲ್ಲಿ ನಡೆಸಲಾಗಿತ್ತು ಎಂದು ಹೇಳಲಾಗುತ್ತಿದ್ದ ಜಾತಿ-ಜನಗಣತಿಯು (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ), ಪಾರದರ್ಶಕವಾಗಿ ನಡೆದಿಲ್ಲ ಎಂದು ರಾಜ್ಯದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಪ್ರಮುಖ ನಾಯಕರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ಹೈಕಮಾಂಡ್ ಮತೊಮ್ಮೆ ಜಾತಿ ಜನಗಣತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದ ಬಗ್ಗೆ, ಸಾರ್ವಜನಿಕರಿಗೆ ವಿಶ್ವಾಸವೂ ಹೆಚ್ಚಾಗಬಹುದು. ಈಗ ನಡೆಯುವ ಜಾತಿ ಜನಗಣತಿ ‘ ಪಾರದರ್ಶಕವಾಗಿ’ ಕೂಡಿರಲಿ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಸಮೀಕ್ಷೆ ನಡೆಯಲಿ.
– ಬೂಕನಕೆರೆ ವಿಜೇಂದ್ರ , ಕುವೆಂಪುನಗರ ಮೈಸೂರು
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…