Andolana originals

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್ ನೀರು ಬಿಡಬೇಕು ಎಂದು ಆದೇಶ ಹೊರಡಿಸಿತ್ತು, ಈ ಆದೇಶವನ್ನು ರಾಜದ್ಯಂತ ಹಲವಾರು ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ವಿರೋಧಿಸಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದವು.

ಇಂತಹ ಸಂದರ್ಭದಲ್ಲಿ ವಯನಾಡ್ ಪ್ರದೇಶದಲ್ಲಿ ಮಳೆಯಾದ್ದರಿಂದ, ಕಬಿನಿ ಜಲಾಶಯ ಭರ್ತಿಯಾಗಿ ಕಳೆದ ಎರಡು ದಿನಗಳಿಂದ ಸುಮಾರು ೧೫ ರಿಂದ ೨೦ ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವಾಗಿದೆ. ಇದರಿಂದಾಗಿ ಸದ್ಯಕ್ಕೆ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗಿದೆ.ಮುಂದಿನ ದಿನಗಳಲ್ಲಿಇದೇರೀತಿ ಸಂಕಷ್ಟ ಎದುರಾದಾಗ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರ್ಕಾರ ಈಗಲೇ ಚಿಂತಿಸಿ, ಸುಪ್ರೀಂ ಕೋರ್ಟ್ ಮುಂದೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲದೇ ಹೋದರೆ ಇಂತಹ ಪರಿಸ್ಥಿತಿ ಆಗಾಗ ಮರುಕಳಿಸುತ್ತಲೇ ಇರುತ್ತದೆ.

– ಬೂಕನಕೆರೆ ವಿಜೇಂದ್ರ, ಮೈಸೂರು

 

ಆಂದೋಲನ ಡೆಸ್ಕ್

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

4 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

5 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

6 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

8 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

13 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

13 hours ago