ಓದುಗರ ಪತ್ರ
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ ಕೊಲ್ಲಿ ರಾಷ್ಟ್ರಗಳಿಗೆ ತೆರಳಿರುವ ರಾಜಕಾರಣಿಗಳು, ಜನಪ್ರತಿನಿದಿಗಳು, ಗಣ್ಯರು ವಾಪಸ್ ಬರುವುದಕ್ಕೆ ವಿಮಾನ ಸೌಲಭ್ಯ ಸಿಗದೆ ಎಲ್ಲಿದ್ದಾರೋ ಅಲ್ಲಿಯೇ ಉಳಿಯುವಂತಹ ಸ್ಥಿತಿ ಎದುರಾಗಿದೆ. ಇವರನ್ನು ವಾಪಸ್ ತಾಯ್ನಾಡಿಗೆ ಕರೆತರುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ. ಆದರೆ, ದುಬೈನಲ್ಲಿ ಸಿಲುಕಿದ್ದ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರನ್ನು ಇತ್ತೀಚೆಗೆ ಭಾರತಕ್ಕೆ ವಾಪಸ್ ಕರೆತರಲಾಗಿದೆ. ಅವರು ತಮ್ಮನ್ನು ಹಿಂದಕ್ಕೆ ಕರೆತರುವುದರಲ್ಲಿ ಕೇಂದ್ರ ಸರ್ಕಾರ ಸಮರ್ಪಕವಾಗಿ ಸ್ಪಂದಿಸಲಿಲ್ಲ. ಬದಲಿಗೆ ದುಬೈ ಸರ್ಕಾರ, ಸ್ಥಳೀಯರು ಮತ್ತು ಕರ್ನಾಟಕ ಸರ್ಕಾರದವರು ನೆರವಾದರು ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯರ ಸ್ಥಿತಿಯೇ ಹೀಗಾದರೆ, ಇತರ ಜನರ ಪಾಡೇನಾಗಬೇಕು? ಕೇಂದ್ರ ಸರ್ಕಾರ ಇಂತಹ ಸಂದಿಗ್ಧತೆಯ ಸಂದರ್ಭದಲ್ಲಿ ತಾರತಮ್ಯ ಮಾಡದೆ, ಯುದ್ಧದ ದೆಸೆಯಿಂದ ವಾಪಸ್ ಬರಲಾಗದೆ ಪರಿತಪಿಸುತ್ತಿರುವ ಎಲ್ಲ ಭಾರತೀಯರನ್ನೂ ಒಂದೇ ಭಾವನೆಯಿಂದ ಗುರುತಿಸಿ, ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕೊಲ್ಲಿ ರಾಷ್ಟ್ರಗಳಲ್ಲಿ ಉಳಿದಿರುವ ಭಾರತೀಯರನ್ನು ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಲು ಆದ್ಯತೆ ಮೇರೆಗೆ ಕ್ರಮವಹಿಸಬೇಕು.
-ಜಿ.ಎಂ.ಪ್ರಕಾಶ್, ಗಾಂಧಿನಗರ, ಮೈಸೂರು
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…