ಓದುಗರ ಪತ್ರ
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ ಅಗೆದು ಹಾಗೇ ಬಿಡುತ್ತಿದ್ದಾರೆ. ಪುಟ್ಟ ಮಕ್ಕಳು ಹಳ್ಳಕ್ಕೆ ಬೀಳುವ ಸಾಧ್ಯತೆಯಿರುತ್ತದೆ ಹಾಗೂ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಬಡಾವಣೆಯ ಕೆಲವು ನಿವಾಸಿಗಳು ಮನೆಯ ಮುಂದೆ ಹಾಕಿಸಿದ್ದ ಕಾಂಕ್ರಿಟ್‌ನ್ನೂ ಅಗೆದು ಹಾಳು ಮಾಡಿದ್ದಲ್ಲದೇ ನೀರಿನ ಪೈಪುಗಳಿವೆಯೇ, ಗ್ಯಾಸ್ ಪೈಪ್ ಲೈನ್ ಮತ್ತು ವಿದ್ಯುತ್ ಕೇಬಲ್‌ಗಳಿವೆಯೇಎಂಬುದನ್ನು ಅರಿಯದೇ, ಕೆಲವು ಸಂದರ್ಭಗಳಲ್ಲಿ ತಿಳಿಸಿದ್ದರೂ ಉಡಾಫೆಯಾಗಿ ವರ್ತಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದಾರೆ. ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್‌ನ ಮನೆಯ ಮುಂದೆ ಹಳ್ಳ ತೆಗೆದಿದ್ದು, ಅಲ್ಲಿನ ನೀರಿನ ಪೈಪು ಒಡೆದು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾಮಗಾರಿಗೂ ಮುನ್ನ ನಿವಾಸಿಗಳನ್ನು ಸಂಪರ್ಕಿಸಿ, ಗ್ಯಾಸ್, ನೀರು, ವಿದ್ಯುತ್ ಕೇಬಲ್ ಎಲ್ಲಿ ಹೋಗಿದೆ ಎಂಬುದನ್ನು ಖಚಿತಪಡಿಸಿಕೊಂಡು, ಯಾರಿಗೂ ತೊಂದರೆಯಾಗದಂತೆ ಕಾರ್ಯನಿರ್ವಹಿಸುವುದು ಅವಶ್ಯ.
-ವಿಜಯ್ ಹೆಮ್ಮಿಗೆ, ಮೈಸೂರು
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…