ಮುಖ್ಯಮಂತ್ರಿ ಗಾದಿ ಕುರಿತು ರಾಜ್ಯದಲ್ಲಿ ಗುದ್ದಾಟ ದಿನೇ ದಿನೇ ತಾರಕಕ್ಕೇರುತ್ತಿದೆ.ಇದರಿಂದ ರಾಜ್ಯದ ಮತದಾರರಲ್ಲಿ ಗೊಂದಲ ಉಂಟಾಗಿದೆ. ಅಭಿವೃದ್ಧಿ ಕೆಲಸಗಳಿಗೂ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಬಗ್ಗೆ ಮಾತುಕತೆ ನಡೆದಿದೆಯೇ ಎಂಬುದನ್ನು ಕಾಂಗ್ರೆಸ್ ವರಿಷ್ಠರು ಮತದಾರ ಪ್ರಭುಗಳ ಮುಂದೆ ಬಹಿರಂಗಪಡಿಸಲಿ.
ರಾಜ್ಯದ ಜನ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.ಈಗ ಅವರಲ್ಲಿ ಗೊಂದಲ ಸೃಷ್ಟಿಸಬೇಡಿ. ಸರ್ಕಾರದಿಂದ ಅಭಿವೃದ್ಧಿ ಕೆಲಸಗಳನ್ನು ನಿರೀಕ್ಷಿಸುತ್ತಿದ್ದ ಮತದಾರರು ದಿನನಿತ್ಯ ಅಧಿಕಾರ ಹಂಚಿಕೆಯ ವಿಷಯವನ್ನೇ ದೃಶ್ಯ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ನೋಡುವಂತಾಗಿದೆ.ಒಬ್ಬೊಬ್ಬ ನಾಯಕನ ಮಾತುಗಳೂ ಗೊಂದಲ ಮಯವಾಗಿವೆ.ಆದಷ್ಟು ಬೇಗ ಅಧಿಕಾರ ಹಂಚಿಕೆಯ ಗೊಂದಲವನ್ನು ಪರಿಹರಿಸಿ, ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗದಂತೆ ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳಬೇಕಿದೆ. ಏಕೆಂದರೆ ಇದು ಕಾಂಗ್ರೆಸ್‌ನ ಆಂತರಿಕ ವಿಷಯ ಎನ್ನುವುದಕ್ಕಿಂತ ರಾಜ್ಯದ ಜನತೆಯ ಗೌರವ ಮತ್ತು ಅಭಿವೃದ್ಧಿಯ ಪ್ರಶ್ನೆಯಾಗಿದೆ.
– ಪಿ.ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು





