ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಚಾಮುಂಡಿಬೆಟ್ಟವನ್ನು ಅಭಿವೃದ್ಧಿ ಪಡಿಸುವ ನೆಪದಲ್ಲಿ ಗ್ರೇಟರ್ ಮೈಸೂರು ವ್ಯಾಪ್ತಿಗೆ ಒಳಪಡಿಸದೆ, ಧಾರ್ಮಿಕವಾಗಿ ಹಾಗೂ ಪ್ರವಾಸಿ ತಾಣವಾಗಿರುವ ಚಾಮುಂಡಿ ಬೆಟ್ಟವನ್ನು ಗ್ರಾಮ ಪಂಚಾಯಿತಿಯಲ್ಲೇ ಉಳಿಸಿಕೊಡಬೇಕು ಎಂದು ಅಲ್ಲಿನ ಗ್ರಾಮಸ್ಥರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿರುವುದು ಶ್ಲಾಘನೀಯ. ಈಗಾಗಲೇ ಬೆಟ್ಟ ಕೆಲವು ಕಡೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ, ಚಾಮುಂಡಿ ಬೆಟ್ಟ ಗ್ರೇಟರ್ ಮೈಸೂರಿಗೆ ಸೇರ್ಪಡೆಯಾದರೆ ಅಭಿವೃದ್ಧಿ ನೆಪದಲ್ಲಿ ಇನ್ನೂ ಹೆಚ್ಚಿನ ಅನಾಹುತವಾಗುವುದರಲ್ಲಿ ಸಂದೇಹವೇ ಇಲ್ಲ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





