ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಏಕೆಂದರೆ ಈ ಕ್ಷೇತ್ರಗಳು ಮೂಲ ಸೌಕರ್ಯಗಳಿಲ್ಲದೆ ಸೊರಗಿವೆ. ಪ್ರಾಧಿಕಾರದ ಮೂಲಕ ಈ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದುದು ಇಂದಿನ ತುರ್ತು. ಹಾಗಾಗಿ ಸರ್ಕಾರದ ನಿರ್ಧಾರ ಸೂಕ್ತವಾದುದಾಗಿದೆ. ಈ ಕ್ಷೇತ್ರಗಳು ಪ್ರಾಚೀನ ಹಿಂದೂ ಸಂಪ್ರದಾಯಕ್ಕೆ ಸೇರಿದವುಗಳೆಂದು ಮಾನ್ಯ ಸಂಸದರು ಅಭಿಪ್ರಾಯಪಟ್ಟಿರುವುದು ಸಮಂಜಸವಲ್ಲ. ಏಕೆಂದರೆ ಈ ಕ್ಷೇತ್ರಗಳು ಶರಣ ಬಸವಣ್ಣನವರ ಸಮಾಜೋ-ಸಾಂಸ್ಕೃತಿಕ ಚಳವಳಿಯ ಮತ್ತು ಜಾತ್ಯತೀತ, ವರ್ಗಾತೀತ ನಿಲುವು ಸಂವೇದನೆಯ ಪ್ರತೀಕಗಳು. ಮಂಟೇಸ್ವಾಮಿ ಅವರ ನಿಲುವು, ವ್ಯಕ್ತಿತ್ವ ಅನುಭಾವಿ ಅಲ್ಲಮನನ್ನು ನೆನಪಿಗೆ ತರುತ್ತದೆ. ಹಾಗಾಗಿ ಪ್ರಾಚೀನ ಹಿಂದೂ ಸಂಪ್ರದಾಯಕ್ಕೂ ಈ ಕ್ಷೇತ್ರಗಳ ಮಹನೀಯರ ವಿಚಾರ, ಸಂವೇದನೆ, ಸಂಪ್ರದಾಯಕ್ಕೂ ಯಾವುದೇ ಸಂಬಂಧ ಏರ್ಪಡುವುದಿಲ್ಲ. ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಮೂಲಕ ಈ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿರುವುದನ್ನು ಸಂತಸದಿಂದ ಸ್ವಾಗತಿಸಬೇಕಾಗಿದೆ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…