Andolana originals

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ ತಂದಿದೆ.

ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದ ಮಲ್ಟಿ ಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ನಿಗದಿಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್‌ಗಳಿಗೆ ಬಂದು ಸಿನಿಮಾ ನೋಡುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಸಿನಿಮಾ ಟಿಕೆಟ್‌ಗಳಿಗೆ ಯಾವುದೇ ನಿಗದಿತ ದರ ಇಲ್ಲದಿರುವ ಪರಿಣಾಮ ಥಿಯೇಟರ್‌ಗಳ ಮಾಲೀಕರು ತಮ್ಮಿಚ್ಛೆಯನುಸಾರ ದರ ನಿಗದಿ ಮಾಡುತ್ತಿದ್ದು, ಸಿನಿಮಾ ಬಿಡುಗಡೆಯಾದ ಬಳಿಕ ದಿನಕಳೆದಂತೆ ದರ ಏರಿಳಿತವಾಗುತ್ತದೆ. ಅಲ್ಲದೆ ಅನ್ಯಭಾಷೆಯ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಿ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಾರೆ. ಇದರಿಂದಾಗಿ ಜನರು ಥಿಯೇಟರ್ ಗಳಿಗೆ ಬರಲು ಹಿಂದೇಟು ಹಾಕುತ್ತಾರೆ. ಇದೆಲ್ಲವನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೨೦೧೩ರಲ್ಲಿ ತಮ್ಮದೇ ಸರ್ಕಾರದ ಅಧಿಕಾರದಲ್ಲಿದ್ದಾಗ ಏಕ ಪರದೆ ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ಒಂದೇ ದರ ನಿಗದಿ ಮಾಡಿದ್ದನ್ನು ನೆನೆಪಿಸಿಕೊಂಡು, ಸಿನಿ ಪ್ರಿಯರಿಗೆ ಅನುಕೂಲವಾಗುವಂತೆ ದರ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಹೆಚ್ಚಿನ ಮಂದಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲು ಅನುಕೂಲವಾಗಲಿದ್ದು, ಕನ್ನಡ ಸಿನಿಮಾಗಳ ಬೆಳವಣಿಗೆಯೂ ಆಗಲಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago