Andolana originals

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಲಿ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ ತಾಲ್ಲೂಕಿನಲ್ಲಿ ಕಬಿನಿ ಜಲಾಶಯ, ನಗು ಜಲಾಶಯ, ತಾರಕ ಜಲಾಶಯ, ಹೆಬ್ಬಾಳ್ ಜಲಾಶಯಗಳಿವೆ. ಇಷ್ಟೆ ಜಲಾಶಯಗಳು ಇದ್ದರೂ ಎಚ್. ಡಿ. ಕೋಟೆ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ಮಕ್ಕಳು ತೊಂದರೆಪಡುವಂತಾಗಿದೆ.

ಈ ಬಸ್ಸು ನಿಲ್ದಾಣದಿಂದ ದಿನನಿತ್ಯ ವಿದ್ಯಾರ್ಥಿಗಳು ಸೇರಿ ಸಾಕಷ್ಟು ಮಂದಿ ಪರಸ್ಥಳಗಳಿಗೆ ಓಡಾಡುತ್ತಾರೆ. ಆದರೆ ಇಂತಹ ಸ್ಥಳದಲ್ಲಿ ಅದೂ ಈಗಿನ ಕಾಲದಲ್ಲಿ ಶುದ್ಧ ಕುಡಿವ ನೀರಿನ ವ್ಯವಸ್ಥೆ ಇಲ್ಲವೆಂದರೆ ಅಚ್ಚರಿ ಜತೆಗೆ ಬೇಸರ ಮೂಡಿಸುತ್ತದೆ. ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ. ಬೇಸಿಗೆ ಶುರುವಾಗಲು ಸಾಕಷ್ಟು ಸಮಯವಿದ್ದರೂ ಈಗ ಕಂಡುಬರುತ್ತಿರುವ ಬಿಸಿಲು ಬೇಸಿಗೆಯನ್ನೂ ನೆನಪಿಸುತ್ತದೆ. ಹಾಗಾಗಿ ಆದಷ್ಟು ಬೇಗ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

1 hour ago

ಓದುಗರ ಪತ್ರ: ಹಳೆ ಪಿಂಚಣಿ ಮರುಜಾರಿಯಿಂದ ಖಜಾನೆಗೆ ಭಾರ ಆಗದೇ?

ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫…

1 hour ago

ಓದುಗರ ಪತ್ರ: ದಸರಾ ಚಲನಚಿತ್ರೋತ್ಸವ ಕೈಬಿಡಬಾರದು

ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ…

2 hours ago

ವರ್ಷದಲ್ಲಿ 180 ದ್ವಿಚಕ್ರ ವಾಹನಗಳ ಕಳ್ಳತನ!

ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ…

2 hours ago

ಧ್ವನಿವರ್ಧಕ ಬಳಕೆ; ನಿಯಮ ಉಲ್ಲಂಘಿಸಿದಲ್ಲಿ ಕ್ರಮ

ನವೀನ್ ಡಿಸೋಜ ರಾತ್ರಿ ೧೦ರಿಂದ ಬೆಳಿಗ್ಗೆ ೬ರವರೆಗೆ ಧ್ವನಿವರ್ಧಕ, ಡಿಜೆ ಬಳಕೆಗೆ ನಿರ್ಬಂಧ; ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ…

2 hours ago

ಬಿರುಕು ಬಿಟ್ಟ ಗೋಡೆಗಳು, ಉದುರಿ ಬೀಳುವ ಸಿಮೆಂಟ್ ಪದರ…

ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡದ ದುಸ್ಥಿತಿ; ಸಾರ್ವಜನಿಕರ ಅಸಮಾಧಾನ  ಕೆ.ಆರ್.ನಗರ: ಬಿರುಕುಬಿಟ್ಟ ಗೋಡೆಗಳು, ಉದುರಿ ಬೀಳುವ…

2 hours ago