Mysore
27
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಓದುಗರ ಪತ್ರ: ಚರಂಡಿಗಳನ್ನು ಸ್ವಚ್ಛಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಎಲ್ಲ ಬೀದಿಗಳಲ್ಲಿಯೂ ಚರಂಡಿಗಳು ಕಟ್ಟಿಕೊಂಡಿದ್ದು, ದುರ್ವಾಸನೆ ಬೀರಲಾರಂಭಿಸಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಮಳೆ ಬಿದ್ದಂತೆಲ್ಲ ಈ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತ್ತಿದ್ದು, ದುರ್ವಾಸನೆ ಊರಿಗೆಲ್ಲ ತುಂಬಿಕೊಳ್ಳುತ್ತಿದೆ. ಹೀಗಾಗಿ ಜನರು ಮನೆಯ ಹೊರಗೆ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಈ ಬಗ್ಗೆ ಇತ್ತೀಚಿಗೆ ನಡೆದ ಗ್ರಾಮಸಭೆಯಲ್ಲಿ ದೂರು ನೀಡಿದ್ದರೂ ಗ್ರಾಮ ಪಂಚಾಯಿತಿಯವರು ಚರಂಡಿಗಳನ್ನು ಸ್ವಚ್ಛಗೊಳಿಸುವ ಗೋಜಿಗೇ ಹೋಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಎಚ್ಚತ್ತುಕೊಂಡು ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕಿದೆ.

-ರಾಜೇಶ್, ಅಂತರಸಂತೆ ಎಚ್.ಡಿ.ಕೋಟೆ ತಾ

 

Tags: