ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…