Andolana originals

ಓದುಗರ ಪತ್ರ: ಕಟ್ಟಡದ ಅವಶೇಷಗಳ ರಾಶಿ ತೆರವುಗೊಳಿಸಿ

ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು

 

andolana

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

11 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

12 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

12 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago