ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಗಿರಿಜನ ಆಸ್ಪತ್ರೆಗೆ ಕೆಲ ವರ್ಷಗಳಿಂದ ಬೀಗ ಜಡಿಯಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ.
ಅಂತರಸಂತೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ವಾದ ಬಳಿಕ ಗಿರಿಜನ ಆಸ್ಪತೆಯ ಕಟ್ಟಡವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಟ್ಟಡ ಪಾಳು ಬಿದ್ದಿದೆ. ಈ ಆಸ್ಪತ್ರೆಗೆ ಉತ್ತಮ ಕಟ್ಟಡ, ಹಾಸಿಗೆಗಳು ಹಾಗೂ ವಿಶಾಲವಾದ ಸ್ಥಳಾವಕಾಶವಿದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಇದರಿಂದಾಗಿ ಆಸ್ಪತ್ರೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡು ಅನೈರ್ಮಲ್ಯದ ವಾತಾವರಣ ನಿಮಾರ್ಣವಾಗಿದೆ. ಕೆಲ ತಿಂಗಳ ಹಿಂದಷ್ಟೇ ಈ ಆಸ್ಪತ್ರೆಯ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ರಿಪೇರಿ ಮಾಡಲಾಯಿತು. ಅಲ್ಲದೆ ಆವರಣದಲ್ಲಿ ಒಂದು ಪ್ಯಾರಾಗೋಲವನ್ನೂ ನಿರ್ಮಿಸಲಾಯಿತು. ಇಷ್ಟಿದ್ದರೂ ಆಸ್ಪತ್ರೆಯನ್ನು ಮಾತ್ರ ತೆರೆಯುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಆಸ್ಪತ್ರೆಯನ್ನು ತೆರೆಯಬೇಕಿದೆ. ಇಲ್ಲದಿದ್ದಲ್ಲಿ ಕಟ್ಟಡವನ್ನು ಬದಲಿ ಸಾರ್ವಜನಿಕ ಕೆಲಸಗಳಿಗೆ ಬಳಸಿಕೊಳ್ಳಬೇಕಿದೆ.
-ಕಾರ್ತಿಕ್, ಅಂತರಸಂತೆ, ಎಚ್.ಡಿ.ಕೋಟೆ ತಾ.





