ಹುಣಸೂರು ಪಟ್ಟಣದ ಚಿಕ್ಕಹುಣಸೂರು ಬಡಾವಣೆಯ ಎಚ್. ಡಿ.ಕೋಟೆ ಮುಖ್ಯರಸ್ತೆಯಲ್ಲಿ ಯುಜಿಡಿ ಮ್ಯಾನ್ ಹೋಲ್‌ಗಳು ತುಂಬಿ ಕೊಳಚೆ ನೀರು ಮುಖ್ಯರಸ್ತೆಯ ಮೇಲೆ ಹರಿಯುತ್ತಿಲ್ಲ. ದುರ್ವಾಸನೆ ಯಿಂದಾಗಿ ಈ ರಸ್ತೆಯಲ್ಲಿ ಸಂಚರಿಸು ವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ನಗರಸಭೆ ಅಧಿಕಾರಿಗಳು ಕೂಡಲೇ ಯುಜಿಡಿ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಶ್ರೀಕಾಂತ್, ಹುಣಸೂರು





