ಚಾಮರಾಜಪುರ ರೈಲ್ವೆ ನಿಲ್ದಾಣದಿಂದ ಸರಸ್ವತಿಪುರಂ ಅಗ್ನಿಶಾಮಕ ಠಾಣೆಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿ ಕಸದ ರಾಶಿಯನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟವರು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಡಿ.ಎಂ.ಮಂಜೇಶ್, ಮೈಸೂರು





