Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಓದುಗರ ಪತ್ರ: ಕಸ ತೆರವುಗೊಳಿಸಿ

ಓದುಗರ ಪತ್ರ

ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯ ರಾಜ ಕಾಲುವೆ ಸಮೀಪವಿರುವ ರಸ್ತೆಯ ಬದಿಯಲ್ಲಿ ಕಳೆದೊಂದು ವಾರದಿಂದ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸ ಕೊಳೆತು ಗಬ್ಬು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ.

ಮಹಾನಗರ ಪಾಲಿಕೆಯವರು ಕಸ ವಿಲೇವಾರಿ ಮಾಡದೇ ಇರುವುದರಿಂದ ದಿನ ದಿಂದ ದಿನಕ್ಕೆ ಕಸದ ರಾಶಿ ಹೆಚ್ಚಾಗುತ್ತಿದ್ದು, ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿರು ವುದರಿಂದ ಅಧಿಕಾರಿಗಳೇ ಸ್ವಚ್ಛತಾ ಕಾರ್ಯದ ಉಸ್ತುವಾರಿಗಳಾಗಿದ್ದು ನೈರ್ಮಲ್ಯ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

-ಕಾವ್ಯ , ಮೈಸೂರು

Tags:
error: Content is protected !!