ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ ಮರಗಳು ಒಣಗಿ ಹೋಗಿದ್ದು, ಮಳೆ ಬಂದು ಜೋರಾಗಿ ಗಾಳಿ ಬೀಸಿದರೆ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೆ ಬಿದ್ದರೆ ಅನಾಹುತವಾಗುತ್ತದೆ. ಸಂಬಂಧಪಟ್ಟವರು ಕೂಡಲೇ ಈ ರಸ್ತೆ ಬದಿಯಲ್ಲಿರುವ ಒಣಗಿದ ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.





