ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಮೀಪವಿರುವ ಹೆಗ್ಗಡದೇವನಕೋಟೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಕೆಲವು ರೆಸಾರ್ಟ್‌ಗಳು ಅಕ್ರಮವಾಗಿದ್ದು, ಯುವ ಸಮೂಹವನ್ನು ಮೋಜು ಮಸ್ತಿಗೆ ಆಕರ್ಷಿಸುವುದರ ಜೊತೆಗೆ ಸಫಾರಿಯ ವಾಹನಗಳನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಬಳಸುತ್ತಿರುವ ಕಾರಣ ಅರಣ್ಯ ಪ್ರದೇಶದೊಳಗೆ ವನ್ಯ ಜೀವಿಗಳಿಗೆ ತೊಂದರೆಯಾಗುತ್ತಿದ್ದು, ಅವುಗಳು ನಾಡಿನತ್ತ ನುಗ್ಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಅರಣ್ಯ ಇಲಾಖೆಯವರು ಇತ್ತ ಗಮನ ಹರಿಸಿ ಬಂಡೀಪುರ ಅಭಯಾರಣ್ಯದಲ್ಲಿ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸುವ ಮೂಲಕ ವನ್ಯಜೀವಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





