ಮೈಸೂರಿನ ವಿಜಯನಗರ ನಾಲ್ಕನೇ ಹಂತದ ‘ಎಂಡಿಎ’ ( ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಳಿಗೆಗಳನ್ನು ತೆರವುಗೊಳಿಸಿ ಸುಮಾರು ರೂ.೪೦ ಕೋಟಿಗೂ ಹೆಚ್ಚು ಬೆಲೆ ಬಾಳುವ ಆಸ್ತಿಯನ್ನು ಎಂಡಿಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿರುವುದು ಶ್ಲಾಘನೀಯ. ಇದೇ ರೀತಿ ಇನ್ನೂ ಹಲವಾರು ಕಡೆ ಎಂಡಿಎಗೆ ಸೇರಿದ ಜಾಗದ ಒತ್ತುವರಿಯನ್ನು ತೆರವುಗೊಳಿಸಲು ‘ಎಂಡಿಎ’ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು





