ಹೆಗ್ಗಡದೇವನಕೋಟೆ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಬಿದರಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ತೆರಣಿಮುಂಟಿ – ಬಿದರಹಳ್ಳಿ – ಉಯ್ಯಂಬಳ್ಳಿ ಮುಖ್ಯರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಗಿಡ ಮರಬಳ್ಳಿಗಳು ಬೆಳೆದು ನಿಂತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ.
ರಸ್ತೆ ಬದಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿಯವರಿಗೆ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನ ಗ್ರಾಮ ಪಂಚಾಯಿತಿಯವರು ರಸ್ತೆ ಇಕ್ಕೆಲಗಳಲ್ಲಿ ಬೆಳೆದಿರುವ ಅನವಶ್ಯಕ ಗಿಡಮರಗಳನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು





