ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ ಫಾರಂ ಕಡೆಗೆ ತೆರಳುವ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಜಮೀನಿಗೆ ತೆರಳುವ ರೈತರು, ಕೂಲಿ ಕಾರ್ಮಿಕರು ಕೊಳಚೆ ನೀರು ತುಳಿದುಕೊಂಡೇ ಓಡಾಡುವ ಪರಿಸ್ಥಿತಿ ಎದುರಾಗಿದೆ.
ಕೊಳಚೆ ನೀರಿನ ದುರ್ವಾಸನೆಯಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಇನ್ನಾದರೂ ಗ್ರಾಪಂ ಅಧಿಕಾರಿಗಳು ಚರಂಡಿ ಹೂಳು ತೆಗೆಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ವೆಂಕಟೇಶ್, ಗುಂಡ್ಲುಪೇಟೆ





