ಓದುಗರ ಪತ್ರ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್ ಅಳವಡಿಸುವ ಗುತ್ತಿಗೆ ಪಡೆದವರು ನಗರದ ನೂರೊಂದು ಗಣಪತಿ ದೇವಾಲಯದ ಪಕ್ಕದಲ್ಲಿರುವ ಅರಳಿ ಮರದ ಕೆಳಗೆ ಕೇಬಲ್‌ನ್ನು ಇಟ್ಟು ತಿಂಗಳುಗಳೇ ಕಳೆದರೂ ತೆರವುಗೊಳಿಸದೇ ಇರುವುದರಿಂದ ಇಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ವರೆಗೂ ಅರಳಿ ಮರದ ಕೆಳಗೆ ವಾಹನಗಳನ್ನು ನಿಲ್ಲಿಸುತ್ತಿದ್ದ ವಾಹನಗಳ ಸವಾರರು ವಿದ್ಯುತ್ ಕೇಬಲ್‌ಗಳನ್ನು ಇಟ್ಟಿರುವುದರಿಂದಾಗಿ ರಸ್ತೆಯ ಅಂಚಿನಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು, ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಸೆಸ್ಕ್ ಅಧಿಕಾರಿಗಳು ಅರಳಿ ಮರದ ಕೆಳಗೆ ಇಟ್ಟಿರುವ ಕೇಬಲ್‌ಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವ ಮೂಲಕ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸುಮನ್ಯು, ಮೈಸೂರು
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…