Andolana originals

ಓದುಗರ ಪತ್ರ: ಇರ್ವಿನ್ ರಸ್ತೆ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಬದಿಯಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಿರುವುದರಿಂದ ಅತ್ತ ಫುಟ್‌ಪಾತ್ ಇಲ್ಲದೇ ಇತ್ತ ರಸ್ತೆಯ ಬದಿಯಲ್ಲಿ ನಡೆಯಲೂ ಆಗದೆ ಪಾದಚಾರಿಗಳು ರಸ್ತೆಗಿಳಿದು ನಡೆಯುವುದು ಅನಿವಾರ್ಯವಾಗಿದ್ದು, ಈ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಪೊಲೀಸರು ಇರ್ವಿನ್ ರಸ್ತೆಯಲ್ಲಿ ಫರ್ನಿಚರ್ ಅಂಗಡಿಯವರಿಂದ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಎಂ.ಎನ್.ಧರಣಿ ವೆಂಕಟೇಶ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

2 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

3 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

3 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

3 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

8 hours ago