ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ನಗರ ಪಾಲಿಕೆಯ ಅಧಿಕಾರಿಗಳು ಈ ರಸ್ತೆಯಲ್ಲಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





