ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಜನರಲ್ಲಿ ಗೊಂದಲ ಉಂಟುಮಾಡುತ್ತಿದೆ. ಕೆಲವರ ಮನೆಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರೂ ಕೆಲಸಕ್ಕೆ ತೆರಳುತ್ತಿದ್ದು, ಗಣತಿದಾರರು ಸಮೀಕ್ಷೆಗೆ ಬಂದ ಸಂದರ್ಭದಲ್ಲಿ ವಯಸ್ಸಾದ ತಂದೆ ತಾಯಿಗಳು ಇರುತ್ತಾರೆ. ಇಂಥ ಸಂದರ್ಭದಲ್ಲಿ ಸಮೀಕ್ಷಾದಾರರು ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಿಸಲು ಅವರಿಗೆ ತಿಳಿಯುವುದಿಲ್ಲ.
ಸಾರ್ವಜನಿಕರು ವೈಯಕ್ತಿಕ ಮಾಹಿತಿ ಕೊಡುವುದರಿಂದ ಜನರಿಗೆ ಏನು ಲಾಭ ಎಂಬುದನ್ನು ಸರ್ಕಾರ ಮನದಟ್ಟು ಮಾಡಕೊಡಬೇಕಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ಸರಳವಾರ ಪ್ರಶ್ನೆಗಳನ್ನು ಕೇಳುವಂತೆ ಗಣತಿದಾರರಿಗೆ ಸಂಬಂಧಪಟ್ಟ ಅಧಿಕಾರಿಗಳು ತಿಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಪಿ .ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು





