ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ. ಈ ಸಮೀಕ್ಷೆ ಕಾರ್ಯದ ಫಾರಂನಲ್ಲಿ ಕೆಲವು ಬೇಡದ ಅಂಶಗಳು ಸೇರಿವೆ.
ನೀವು ಯಾವ ಜತಿಗೆ ಸೇರಿದವರು? ನೀವು ಆದಾಯ ತೆರಿಗೆ ಪಾವತಿದಾರರೇ ? ನಿಮ್ಮ ವೃತ್ತಿ ಯಾವುದು? ಇಂತಹ ಪ್ರಶ್ನೆಗಳಿದ್ದು, ಫಾರಂನಲ್ಲಿ ಕಡ್ಡಾಯವಾಗಿ ಬರೆಯಲೇಬೇಕು ಎಂದು ಸಮೀಕ್ಷೆದಾರರು ಹೇಳುತ್ತಾರೆ.
ಗೃಹ ಜ್ಯೋತಿಗೂ, ಜಾತಿಗೂ ಏನು ಸಂಬಂಧ? ಎಲ್ಲಕ್ಕಿಂತ ಮುಖ್ಯವಾಗಿ ಈ ಫಾರಂ ನಲ್ಲಿ, ನಾನು ಗೃಹ ಜ್ಯೋತಿಗೆ ಸಂಬಂಽಸಿದ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಲು ಇಚ್ಛಿಸುವುದಿಲ್ಲ, ನನ್ನ ಮನೆಗೆ ನೀಡಿ ರುವ ವಿದ್ಯುತ್ ಸಂಪರ್ಕದ ಗೃಹ ಜ್ಯೋತಿ ಯೋಜನೆಯ ಲಾಭವನ್ನು ಸ್ಥಗಿತ ಗೊಳಿಸಲು ನನ್ನ ಅಭ್ಯಂತರವಿಲ್ಲ ಎಂದು ಪ್ರಿಂಟ್ ಆಗಿದೆ. ಇದರ ಕೆಳಗಡೆ ಸಹಿ ಹಾಕಲು ಸಮೀಕ್ಷೆ ಮಾಡಲು ಬಂದಿರುವವರು ಹೇಳುತ್ತಾರೆ. ಇದು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿದೆ.
ಕೆಲವರು ಹೇಳುವಂತೆ ಮುಂದಿನ ದಿನಗಳಲ್ಲಿ ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರನ್ನು ಗೃಹ ಲಕ್ಷ್ಮಿ ಯೋಜನೆಯಿಂದ ಹೊರಗಿಡುವ ಹುನ್ನಾರ ಇರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು.
– ಬೂಕನಕೆರೆ ವಿಜೇಂದ್ರ, ಮೈಸೂರು
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…