ಓದುಗರ ಪತ್ರ
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ ಸರಕಾರದ ಕಾರ್ಯಾಚರಣೆಯಲ್ಲ. ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶವೂ ಇದೆ. ಇದು ಪ್ರತಿಯೊಬ್ಬ ನಾಗರಿಕನೂ ಪಾಲ್ಗೊಳ್ಳಬೇಕಾದ ಜನಾಂದೋಲನ ಆಗಬೇಕು. ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಟ್ರಾಫಿಕ್ ದಟ್ಟಣೆ ಮತ್ತು ಪಾದಚಾರಿ ಮಾರ್ಗಗಳ ಒತ್ತುವರಿಯು, ಪಾದಚಾರಿಗಳ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವುದರಿಂದ ಒತ್ತುವರಿ ತೆರವು ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿ ಒತ್ತುವರಿ ತೆರವು ಮಾಡಿಸುತ್ತಿರುವುದು ಶ್ಲಾಘನೀಯ.
ಕಂದಾಯ ಸಚಿವರಾಗಿzಗ ಇಲಾಖೆಯನ್ನು ಒಂದು ತಹಬಂದಿಗೆ ತಂದು ಜನಮನ್ನಣೆ ಪಡೆದ ಕೃಷ್ಣ ಬೈರೇಗೌಡರು ಈಗ ಜಿಬಿಎ ಸಚಿವರಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಕಂಕಣ ತೊಟ್ಟಿರುವುದು ಸ್ವಾಗತಾರ್ಹ.
ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಬೆಂಗಳೂರು ನಗರದ ಎಲ್ಲ ಭಾಗಗಳಲ್ಲಿಯೂ ಪಾದಚಾರಿ ಮಾರ್ಗ ಅತಿಕ್ರಮಣವನ್ನು ಮುಕ್ತಗೊಳಿಸುವ ಗುರಿಯನ್ನು ಜಿಬಿಎ ಹೊಂದಿದೆ, ಎಂದು ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹೇಳಿರುವುದು ಒಳ್ಳೆಯ ಬೆಳವಣಿಗೆ. ರಾಜ್ಯದ ಎಲ್ಲ ನಗರಗಳಲ್ಲೂ ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…