ಓದುಗರ ಪತ್ರ
ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ ಆರು ತಿಂಗಳುಗಳ ಹಿಂದೆ ಅಗೆದಿರು ವುದರಿಂದ ಈ ರಸ್ತೆಯು ಗುಂಡಿ ಮಯವಾಗಿದೆ, ಈ ಕಾರಣದಿಂದ ಪ್ರತಿ ದಿನವೂ ಇಲ್ಲಿ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇದೆ..
ಬಹುತೇಕ ನಗರ ಪಾಲಿಕೆಯ ಅಧಿಕಾರಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದರೂ, ಕನಿಷ್ಠ ಪಕ್ಷ ಈ ಗುಂಡಿಗಳನ್ನು ಮುಚ್ಚಿಸುವಷ್ಟು ತಿಳಿವಳಿಕೆ ಅವರಿಗೆ ಇಲ್ಲವೇ? ಇದು ಕೇವಲ ಆದಿಚುಂಚನಗಿರಿ ರಸ್ತೆಯ ಸಮಸ್ಯೆಯಲ್ಲ, ಒಳಚರಂಡಿ ವ್ಯವಸ್ಥೆಗಾಗಿ ರಸ್ತೆಯನ್ನು ಅಗೆದು ಹಾಗೆ ಯೇ ಬಿಟ್ಟಿರುವ ಹತ್ತಾರು ರಸ್ತೆಗಳು ಮೈಸೂರು ನಗರದಲ್ಲಿವೆ. ಮೊದಲು ಅಗೆದಿರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅನುಕೂಲ ಕಲ್ಪಿಸುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…