ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಸಮೀಪವಿರುವ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಸಂಚರಿಸಲು ಬಹಳ ಕಷ್ಟವಾಗಿದೆ. ಮಳೆಗಾಲದಲ್ಲಿ ಗುಂಡಿಗಳ ತುಂಬೆಲ್ಲಾ ನೀರು ನಿಂತು ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಕೂಡಲೇ ರಸ್ತೆ ದುರಸ್ತಿ ಮಾಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎಂ.ಎಲ್.ತುಳಸೀಧರ್, ಮಂಡ್ಯ





