ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು ಮಾಡಿದ್ದಾರೆ.
ಚಾಮರಾಜ ನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿದ್ದಾರೆ. ಚಾಮರಾಜನಗರದಲ್ಲಿ ನಡೆದ ಸಹಕಾರ ಸಪ್ತಾಹದ ಸಮಾರೋಪದಲ್ಲೂ ಭಾವವಹಿಸಿದ್ದಾರೆ. ಆದರೆ ಈ ಹಿಂದೆ ಕಾಕತಾಳೀಯವೆಂಬಂತೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು, ಆರ್.ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಮತ್ತು ವೀರೇಂದ್ರ ಪಾಟೀಲ್ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ನಂತರ ತಮ್ಮ ಅಧಿಕಾರವನ್ನು ಕಳೆದುಕೊಂಡಿದ್ದರು.
ಇದಕ್ಕೆ ತದ್ವಿರುದ್ಧವಾಗಿ ಮುಖ್ಯಮಂತ್ರಿಗಳಾದ ನಂತರ ಸಿದ್ದರಾಮಯ್ಯನವರು ಮಾತ್ರ ಅನೇಕ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವುದರ ಮೂಲಕ ಅಲ್ಲಿಯ ಜನರ ವಿಶ್ವಾಸವನ್ನು ಗಳಿಸಿದ್ದಾರೆ. ಈ ಮೂಲಕ ಚಾಮರಾಜನಗರಕ್ಕೆ ಅಂಟಿದ್ದ ಶಾಪಗ್ರಸ್ತ ಜಿಲ್ಲೆ ಎಂಬ ಹಣೆಪಟ್ಟಿಯನ್ನು ತೆಗೆದುಹಾಕಿದ್ದಾರೆ.
– ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.





