ರಾಜ್ಯದಲ್ಲಿ ಸುಮಾರು ೭ ಲಕ್ಷಕ್ಕೂ ಹೆಚ್ಚು ಅನರ್ಹರು ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಅನರ್ಹರು ಇಷ್ಟು ವರ್ಷಗಳ ಕಾಲ ಬಿಪಿಎಲ್ ಪಡಿತರ ಚೀಟಿ ಯಿಂದ ಸರ್ಕಾರದ ಅನ್ನಭಾಗ್ಯದ ಯೋಜನೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಪಡೆದಿರುವುದು ಅಕ್ಷಮ್ಯ ಅಪರಾಧ ಮತ್ತು ಸರ್ಕಾರಕ್ಕೆ ಮಾಡಿದ ಮೋಸ. ಇವರು ಎಷ್ಟು ವರ್ಷಗಳಿಂದ ಸೌಲಭ್ಯಗಳನ್ನು ಪಡೆ ದಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಒಟ್ಟಾರೆ ಮೌಲ್ಯವನ್ನು ನಗದು ರೂಪದಲ್ಲಿ ಸರ್ಕಾರಕ್ಕೆ ವಾಪಸ್ ನೀಡುವಂತೆ ಕಾನೂನು ಕ್ರಮ ಕೈಗೊಳ್ಳಬೇಕು. ಇದರೊಂದಿಗೆ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ನೆರವಾದ ಅಽಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು





