Andolana originals

ಓದುಗರ ಪತ್ರ: ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಂದ ದಂಡ ವಸೂಲಿ ಮಾಡಿ

ರಾಜ್ಯದಲ್ಲಿ ಸುಮಾರು ೭ ಲಕ್ಷಕ್ಕೂ ಹೆಚ್ಚು ಅನರ್ಹರು ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಅನರ್ಹರು ಇಷ್ಟು ವರ್ಷಗಳ ಕಾಲ ಬಿಪಿಎಲ್ ಪಡಿತರ ಚೀಟಿ ಯಿಂದ ಸರ್ಕಾರದ ಅನ್ನಭಾಗ್ಯದ ಯೋಜನೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಪಡೆದಿರುವುದು ಅಕ್ಷಮ್ಯ ಅಪರಾಧ ಮತ್ತು ಸರ್ಕಾರಕ್ಕೆ ಮಾಡಿದ ಮೋಸ. ಇವರು ಎಷ್ಟು ವರ್ಷಗಳಿಂದ ಸೌಲಭ್ಯಗಳನ್ನು ಪಡೆ ದಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಒಟ್ಟಾರೆ ಮೌಲ್ಯವನ್ನು ನಗದು ರೂಪದಲ್ಲಿ ಸರ್ಕಾರಕ್ಕೆ ವಾಪಸ್ ನೀಡುವಂತೆ ಕಾನೂನು ಕ್ರಮ ಕೈಗೊಳ್ಳಬೇಕು. ಇದರೊಂದಿಗೆ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ನೆರವಾದ ಅಽಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು.

 -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

21 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

1 hour ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

1 hour ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

2 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago