Andolana originals

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ‘ಅರ್ಚನ’ ಎಂಬ ಬೃಹತ್ ಗ್ರಂಥವನ್ನು ರಾಷ್ಟ್ರಕವಿ ಕುವೆಂಪು ಅವರು ಬಿಡುಗಡೆಗೊಳಿಸಿ ಮಾತನಾಡಿ, ಸುತ್ತೂರು ಶ್ರೀ ರಾಜೇಂದ್ರ ಮಹಾಸ್ವಾಮೀಜಿಯವರ ೭೦ನೇ ವರ್ಷದ ವರ್ಧಂತಿ ಸಮಾರಂಭಕ್ಕೆ ನಾನು ಬಂದಿರುವುದು ನಿಮ್ಮಲ್ಲಿ ಅನೇಕರಿಗೆ ಆಶ್ಚರ್ಯ ಆಗುವಂತೆ ನನಗೂ ಸ್ವಂತಃ ಉಂಟುಮಾಡಿದೆ. ಭರತ ಖಂಡದಲ್ಲಿ ಶಾಲಾ ಕಾಲೇಜು ತೆರೆದು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಜತಿ,ಮತ, ಭೇದವಿಲ್ಲದೆ ಊಟ ವಸತಿ ಒದಗಿಸಿ ಲಕ್ಷಾಂತರ ಜನರನ್ನು ವಿದ್ಯಾವಂತರನ್ನಾಗಿ ಮಾಡಿದ ಅನೇಕ ಸಾಧು, ಸಂತರು, ಮಠಗಳು ಇವೆ. ಇದನ್ನು ತಪಸ್ಸಿನಂತೆ ಕೈಗೊಂಡಿರುವ ರಾಜೇಂದ್ರ ಸ್ವಾಮಿಗಳು ಅಗ್ರಪಂಕ್ತಿಯಲ್ಲಿzರೆ. ಅವರು ಅಭಿನಂದನೀಯರು ಎಂದು ಹೇಳಿ,ಅವರ ಕಾಯಕ ಸೇವಾ ಕಾರ್ಯಗಳಲ್ಲಿ ತೊಡಗಿರುವವರಿಗೆಲ್ಲ ಎಂದೆಂದಿಗೂ ಆದರ್ಶ ಪ್ರಾಯವಾಗಿರಲಿದೆ ಎಂದು ಹೇಳಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳುವುದು ಹೆಚ್ಚು ಅರ್ಥಪೂರ್ಣ ವೆನಿಸುತ್ತದೆ. ಇದೇ ಸಂದರ್ಭದಲ್ಲಿ ಕುವೆಂಪು ಅವರ ವಿಶ್ವಮಾನವ ಸಂದೇಶದ ಕೃತಿಗಳನ್ನು ಮುದ್ರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ನೀಡಲಾಗಿತ್ತು.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

14 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

16 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

18 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

24 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

39 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

52 mins ago