Mysore
23
broken clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಓದುಗರ ಪತ್ರ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ ಹಾಕಿರುವುದರಿಂದ ವಾಹನಗಳ ಸಂಚಾರಕ್ಕೆ ,ಜನರಿಗೆ ತೀವ್ರ ತೊಂದರೆಯಾಗಿದೆ. ಮೈಸೂರು ಮಹಾನಗರಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ಎರಡು ವರ್ಷ ಕಳೆದಿದ್ದು, ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡರು ಚುನಾವಣೆಯಲ್ಲಿ ಜಯಗಳಿಸಿದ ನಂತರ ಇತ್ತಕಡೆ ಬಂದೇ ಇಲ್ಲ. ಇಲ್ಲಿನ ಜನರು ತಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಬೇಕು ಎಂಬುದೇ ತಿಳಿಯದಾಗಿದೆ. ಶಾಸಕರು ಹಾಗೂ ನಗರಪಾಲಿಕೆ ಅಧಿಕಾರಿಗಳು ಈಗಲಾದರೂ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿ, ರಸ್ತೆಯ ಮೇಲೆ ಹರಡಿರುವ ಮಣ್ಣನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

-ಮೀನಾಕ್ಷಿ, ಮೈಸೂರು

Tags:
error: Content is protected !!