ಓದುಗರ ಪತ್ರ
ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ ಹಾಕಿರುವುದರಿಂದ ವಾಹನಗಳ ಸಂಚಾರಕ್ಕೆ ,ಜನರಿಗೆ ತೀವ್ರ ತೊಂದರೆಯಾಗಿದೆ. ಮೈಸೂರು ಮಹಾನಗರಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ಎರಡು ವರ್ಷ ಕಳೆದಿದ್ದು, ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡರು ಚುನಾವಣೆಯಲ್ಲಿ ಜಯಗಳಿಸಿದ ನಂತರ ಇತ್ತಕಡೆ ಬಂದೇ ಇಲ್ಲ. ಇಲ್ಲಿನ ಜನರು ತಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಬೇಕು ಎಂಬುದೇ ತಿಳಿಯದಾಗಿದೆ. ಶಾಸಕರು ಹಾಗೂ ನಗರಪಾಲಿಕೆ ಅಧಿಕಾರಿಗಳು ಈಗಲಾದರೂ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿ, ರಸ್ತೆಯ ಮೇಲೆ ಹರಡಿರುವ ಮಣ್ಣನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.
-ಮೀನಾಕ್ಷಿ, ಮೈಸೂರು
ನವದೆಹಲಿ: ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು…
ದಕ್ಷಿಣ ಕನ್ನಡ: ಸೌಜನ್ಯ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಮತ್ತೊಂದು ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೂವರು FSL ವೈದ್ಯರನ್ನೊಳಗೊಂಡ…
ಬೆಂಗಳೂರು: ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೊತೆಗಿನ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.…
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಖರ್ಚು? ಈ ಮಾಹಿತಿ ರೋಗಿಗಳಿಗೆ ಮೊದಲೇ ಸಿಗುವಂತೆ ಮಾಡಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ…
ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ…