ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು ಸ್ವಾಗತಾರ್ಹ. ಕನ್ನಡ ಚಲನ ಚಿತ್ರ ರಂಗದಲ್ಲಿ ೫ ದಶಕಗಳಿಗೂ ಹೆಚ್ಚು ಕಾಲದಿಂದ ತೊಡಗಿಸಿಕೊಂಡಿರುವ ಡಾ.ಜಯಮಾಲ ಅವರು, ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್, ಅನಂತನಾಗ್, ದಿವಂಗತ ಶಂಕರ್ ನಾಗ್ ಸೇರಿದಂತೆ ಹಲವಾರು ಖ್ಯಾತ ನಾಯಕ ನಟರಿಗೆ ನಾಯಕಿಯಾಗಿ ನಟಿಸಿ, ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ.ಅದರಲ್ಲೂ ವಿಶೇಷವಾಗಿ ಡಾ.ರಾಜಕುಮಾರ್ ಅವರಿಗೆ ನಾಯಕಿಯಾಗಿ ಪ್ರೇಮದ ಕಾಣಿಕೆ, ತ್ರಿಮೂರ್ತಿ, ಶಂಕರ್ ಗುರು, ಬಬ್ರುವಾಹನ ( ಗೌರವ ಪಾತ್ರ) ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡರು.
ರಾಜಕೀಯದಲ್ಲಿ ಕೂಡ ಸಕ್ರಿಯರಾದ ಅವರು ರಾಜ್ಯ ವಿಧಾನ ಪರಿಷತ್ತಿಗೆ ನಾಮಕರಣಗೊಂಡರು. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ (೨೦೧೩) ಅವರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದರು. ರಾಷ್ಟ್ರ ಪ್ರಶಸ್ತಿಪುರಸ್ಕೃತ ‘ ತಾಯಿ ಸಾಹೇಬ’ಚಿತ್ರವನ್ನು ರಾಷ್ಟ್ರಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ತಾವೇ ನಿರ್ಮಿಸಿ, ನಾಯಕಿಯಾಗಿ ನಟಿಸಿದರು. ೨೦೦೮ ರಲ್ಲಿ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಅವರು ಈಗ ೨ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಡಾ.ಜಯಮಾಲ ಅವರು ಮೈಸೂರಿನ ‘ ಶಕ್ತಿಧಾಮ’ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾರೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
-ಕೆ.ವಿ.ವಾಸು, ವಿವೇಕಾನಂದನಗರ, ಮೈಸೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…