Mysore
26
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಓದುಗರ ಪತ್ರ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಆರಾಧ್ಯ ದೈವ ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರ ಎನಿಸಿದ್ದ ದಿ.ದೇವರಾಜ ಅರಸುರವರ ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಶಾಲಿ ನಾಯಕನಾಗಿ ಹೊರಹೊಮ್ಮಿದ್ದಾರೆ. ೧೬ ಬಾರಿ ರಾಜ್ಯದ ಆಯವ್ಯಯ (ಬಜೆಟ್)ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (೧೯೮೩) ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಸಿದ್ದರಾಮಯ್ಯ ಆ ನಂತರ ರಾಜ್ಯದ ರಾಜಕಾರಣದಲ್ಲಿ ಹಲವಾರು ಮಹತ್ವದ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಅವರು, ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದಲ್ಲದೇ ತಮ್ಮ ಅಧಿಕಾರದ ಎರಡನೇ ಅವಧಿಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಹಲವಾರು ಸಂಘರ್ಷಗಳನ್ನು ಎದುರಿಸುತ್ತಲೇ ರಾಜಕೀಯ ಪರಿಪಕ್ವತೆಯನ್ನು ಮೈಗೂಡಿಸಿಕೊಂಡಿದ್ದು, ೫ ವರ್ಷಗಳ ಅಧಿಕಾರವನ್ನು ಪೂರೈಸುವ ಆಶಯ ಹೊಂದಿದ್ದಾರೆ. ತಮ್ಮ ವಿರುದ್ಧ ಸಾಕಷ್ಟು ಅಪಸ್ವರಗಳು, ಟೀಕೆ ಟಿಪ್ಪಣಿಗಳು ಕೇಳಿ ಬರುತ್ತಿದ್ದರೂ ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ತಮ್ಮ ಕಾಯಕದಲ್ಲಿ ಮುಂದುವರೆದಿದ್ದಾರೆ. ದಾಖಲೆ ರಾಮಯ್ಯನವರಿಗೆ ಅಭಿನಂದನೆಗಳು.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

Tags:
error: Content is protected !!