೨೦೨೫ನೇ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ೧೮ ವರ್ಷಗಳ ನಂತರ ಕಪ್ ಗೆದ್ದು ಅಭಿಮಾನಿಗಳ ಆಸೆಯನ್ನು ಈಡೇರಿಸಿದೆ. ಐಪಿಎಲ್ ಆರಂಭವಾದಾಗಿನಿಂದ ಮೂರು ಬಾರಿ ಫೈನಲ್ ತಲುಪಿದ್ದರೂ ಕಪ್ ಗೆದ್ದಿರಲಿಲ್ಲ. ಆದರೆ ಈ ಬಾರಿಯ ಫೈನಲ್ ಪಂದ್ಯವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸದೆ ವಿಜಯಿಯಾಗಿದೆ. ಎಲ್ಲ ಆಟಗಾರರಿಗೂ ಅಭಿನಂದನೆಗಳು.
–ನಾಗೇಶ್, ಮಾನಸಗಂಗೋತ್ರಿ, ಮೈಸೂರು





