ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಡ್ರಾಮಾ ಕೇರ್, ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್ ಅವರು ತಿಳಿಸಿರುವುದು ಶ್ಲಾಘನೀಯ.
ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯಕ್ಕೆ ಮೆಡಿಕಲ್ ಸೀಟುಗಳು ಹೆಚ್ಚಳವಾಗುತ್ತವೆ. ಹಾಗೂ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ಬಡಜನರಿಗೆ ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ಸಿಗುತ್ತವೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.





