Mysore
23
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಓದುಗರ ಪತ್ರ: ಉಚಿತ ಅಕ್ಕಿ ವಿತರಣೆ ಮುಂದುವರಿಕೆ ಸ್ವಾಗತಾರ್ಹ

ಓದುಗರ ಪತ್ರ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮಾಸಿಕ 5 ಕೆಜಿಯಂತೆ ಅಕ್ಕಿ ವಿತರಿಸುವುದನ್ನು ಮುಂದಿನ 2028ರ ಡಿಸೆಂಬರ್‌ವರೆಗೂ ಮುಂದುವರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ.

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರ್ಗದ ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ರಕ್ತ ಹೀನತೆ ಹಾಗೂ ಅಪೌಷ್ಟಿಕತೆಯಿಂದ ಸಮಸ್ಯೆಗಳು ಬಡಜನರನ್ನು ಕಾಡುತ್ತಿವೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರ ಹಸಿವನ್ನು ನೀಗಿಸಲು ಕೇಂದ್ರ ಸರ್ಕಾರ ಪ್ರತಿ ತಿಂಗಳು ಉಚಿತವಾಗಿ 5 ಕೆ.ಜಿ. ಸಾರಯುಕ್ತ ಅಕ್ಕಿ ವಿತರಣೆ ಮಾಡುವುದು ಬಡವರ್ಗದ ಜನರಿಗೆ ಅನುಕೂಲವಾಗಲಿದೆ. ಅಲ್ಲದೆ ಜನರ ಅಪೌಷ್ಟಿಕತೆ, ವಿಟಮಿನ್ ಬಿ12, ಕಬ್ಬಿಣಾಂಶದ ಕೊರತೆಯನ್ನು ನೀಗಿಸಲು ಇದು ಸಹಕಾರಿಯಾಗಲಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags:
error: Content is protected !!