ಓದುಗರ ಪತ್ರ
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮಾಸಿಕ 5 ಕೆಜಿಯಂತೆ ಅಕ್ಕಿ ವಿತರಿಸುವುದನ್ನು ಮುಂದಿನ 2028ರ ಡಿಸೆಂಬರ್‌ವರೆಗೂ ಮುಂದುವರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ.
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರ್ಗದ ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ರಕ್ತ ಹೀನತೆ ಹಾಗೂ ಅಪೌಷ್ಟಿಕತೆಯಿಂದ ಸಮಸ್ಯೆಗಳು ಬಡಜನರನ್ನು ಕಾಡುತ್ತಿವೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರ ಹಸಿವನ್ನು ನೀಗಿಸಲು ಕೇಂದ್ರ ಸರ್ಕಾರ ಪ್ರತಿ ತಿಂಗಳು ಉಚಿತವಾಗಿ 5 ಕೆ.ಜಿ. ಸಾರಯುಕ್ತ ಅಕ್ಕಿ ವಿತರಣೆ ಮಾಡುವುದು ಬಡವರ್ಗದ ಜನರಿಗೆ ಅನುಕೂಲವಾಗಲಿದೆ. ಅಲ್ಲದೆ ಜನರ ಅಪೌಷ್ಟಿಕತೆ, ವಿಟಮಿನ್ ಬಿ12, ಕಬ್ಬಿಣಾಂಶದ ಕೊರತೆಯನ್ನು ನೀಗಿಸಲು ಇದು ಸಹಕಾರಿಯಾಗಲಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…