ಓದುಗರ ಪತ್ರ
ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಿದೆ.
ಚಿರತೆ ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರೂ ಸಂಬಂಧಪಟ್ಟವರು ಚಿರತೆ ಹಾವಳಿ ನಿಯಂತ್ರಿಸಲು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನನ್ನು ಇಡುವ ಮೂಲಕ ಗ್ರಾಮಸ್ಥರ ಹಿತವನ್ನು ಕಾಪಾಡಬೇಕಾಗಿದೆ.
– ಎಸ್. ಸಚ್ಚಿದಾನಂದ, ಯಡಹಳ್ಳಿ ಗ್ರಾಮ
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…